ಜಪ್ತಿ ಮಾಡಿದ ಹಣ ಹಿಂತಿರುಗಿಸುವಂತೆ ನಟ ದರ್ಶನ್‌ ಅರ್ಜಿ

Most read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೆಗ್ಯುಲರ್‌ ಜಾಮೀನು ಪಡೆದಿರುವ ನಟ ದರ್ಶನ್, ತನಿಖೆಯ ಸಂದರ್ಭದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತನಿಖೆ ನಡೆಯುತ್ತಿದ್ದ ವೇಳೆ 37 ಲಕ್ಷ ರೂಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲು ಉದ್ದೇಶಿಸಿದ್ದರು ಎಂದು ಪೊಲೀಸರು ಆರೋಪ ಮಾಡಿದ್ದರು. ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳುವಂತೆ ಮೂವರಿಗೆ ಆಗಲೇ ಒಂದಿಷ್ಟು ಹಣವನ್ನು ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದರು.

ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು, ಪೊಲೀಸರು ವಶಪಡಿಸಿಕೊಂಡ ಹಣ ಸಾಲವಾಗಿ ಪಡೆಯಲಾಗಿತ್ತು ಎಂದು ವಾದಿಸಿದ್ದರು. ನಟ ದರ್ಶನ್  ಅವರು ಮೋಹನ್ ರಾಜ್ ಎಂಬುವರಿಗೆ ಸಾಲದ ರೂಪದಲ್ಲಿ ಹಣ ನೀಡಿದ್ದರು. ಆ ಹಣವನ್ನು ಮೋಹನ್ ರಾಜ್ ಮರಳಿಸಿದ್ದಾರೆ. ಅದೇ ಹಣ ದರ್ಶನ್‌ ಅವರ ಮನೆಯಲ್ಲಿತ್ತು. ಕೊಲೆ ಮುಚ್ಚಿ ಹಾಕಲು ಬಳಸಲೆಂದು ಇರಿಸಿಕೊಂಡಿದ್ದ ಹಣ ಅಲ್ಲ ಎಂದು ವಾದ ಮಾಡಿದ್ದರು.


ಇದೀಗ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದರ್ಶನ್, ತಮ್ಮ ಹಣವನ್ನು ಮರಳಿಸಲು ಆದೇಶ ಹೊರಡಿಸುವಂತೆ ನ್ಯಾಯಾಲಯದಲ್ಲಿ  ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಆದಾಯ ತೆರಿಗೆ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

More articles

Latest article