Thursday, December 12, 2024

ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ದರ್ಶನ್: ಇಂದು ವಕೀಲರ ಮೂಲಕ ಅರ್ಜಿ ಸಲ್ಲಿಕೆ

Most read

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದು, ಆರೋಪಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.

ಹಲವು ಅಂಶಗಳನ್ನು ಉಲ್ಲೇಖಿಸಿ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈಗ ನಟ ದರ್ಶನ್ ವಕೀಲ ಸುನೀಲ್ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮುಂದೇನು ಎಂಬ ಪ್ರಶ್ನೆ ಕಾದು ನೋಡಬೇಕಿದೆ.

ಜಾಮೀನು ಅರ್ಜಿ ನಿರಾಕರಣೆಯ ಆದೇಶದ ಪ್ರತಿಯನ್ನು ವಕೀಲರು ಪಡೆದುಕೊಂಡಿದ್ದು, ಯಾವ ಆಧಾರದ ಮೇಲೆ ಜಾಮೀನು ನಿರಾಕರಣೆ ಮಾಡಿದ್ದಾರೆ ಅಂತಾ ತಿಳಿದುಕೊಂಡು ಈಗ ಜಾಮೀನು ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ ‌

More articles

Latest article