Wednesday, December 11, 2024

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ಅರ್ಜಿ ವಜಾ

Most read

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಿದ್ದು, ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಅಭಿಯೋಜಕ ಎಸ್​ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರ ಸುದೀರ್ಘ ವಾದ – ಪ್ರತಿವಾದ ಆಲಿಸಿದ 57ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ. ಜೈಶಂಕರ್ ಅವರು ಅ.14ಕ್ಕೆ ಜಾಮೀನು ತೀರ್ಪು ಕಾಯ್ದಿರಿಸಿತ್ತು. ಈಗ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದ್ದು, ನಾಳೆ ಹೈಕೋರ್ಟ್‌ ಗೆಡ ದರ್ಶನ್‌ ಪರ ವಕೀಲರು ಮತ್ತೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೂನ್‌ 11ರಂದು ದರ್ಶನ್ ಹಾಗೂ ಇತರರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್‌ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಪ್ಟೆಂಬರ್‌ 21ರಂದು ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.

More articles

Latest article