ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ 3,991 ಪುಟಗಳ ವಿವರವಾದ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಸುದ್ದಿ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ.