ಹೆಚ್.ಡಿ ಕುಮಾರಸ್ವಾಮಿಗೆ ನಿಂದಿಸಿದ ನಟ ದರ್ಶನ್ ಮಹಿಳಾ ಅಭಿಮಾನಿ ಮಂಜುಳಾ ವಿರುದ್ಧ ದೂರು

Most read

ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಇದೀಗ ಆರೋಪಿ ದರ್ಶನ ಅವರ ಮಹಿಳಾ ಅಭಿಮಾನಿ ಮಂಗಳಾ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಆರೋಪಿ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ದೂರು ನೀಡಿದ್ದಾರೆ.

ಮಂಗಳಾ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಳು. ಈ ಸಂಬಂಧ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ಅವರು ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ‌ ಅವರಿಂದ ಭಿಕ್ಷೆ ಹಾಕಿಸಿಕೊ‌ಂಡ ಮಗ” ಎಂದು ಏಕವಚನದಲ್ಲಿ ಸಮಾಜಿಕ ಜಾಲತಾಣದಲ್ಲಿ ದರ್ಶನ ಅಭಿಮಾನಿ ಮಂಗಳಾ ಅವರು ನಿಂದಿಸಿದ್ದಾರೆ.

More articles

Latest article