Thursday, December 12, 2024

ಕೊನೆಗೂ ಶಸ್ತ್ರಚಿಕಿತ್ಸೆಗೆ ದರ್ಶನ್ ಒಪ್ಪಿಗೆ

Most read

ಬೆಂಗಳೂರು: ಆರೋಗ್ಯದ ಕಾರಣಕ್ಕಾಗಿ ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬಂದಿರುವ ದರ್ಶನ್ ಗೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ನೀಡಲು ವೈದ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರ ಬೆನ್ನು ಹುರಿ ಸಮಸ್ಯೆ ಉಲ್ಬಣವಾಗಿದ್ದು, ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ನವೀನ್ ಅಪ್ಪಾಜಿಗೌಡ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಬಿಜಿಎಸ್ ಆಸ್ಪತ್ರೆಯಲ್ಲೇ ಸರ್ಜರಿ ನಡೆಸಲು ದರ್ಶನ್ ಒಪ್ಪಿಗೆ ಸೂಚಿಸಿದ್ದಾರೆ. ಶಸ್ತ್ರಚಿಕಿತ್ಸೆ ಸಂಬಂಧ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ವೈದ್ಯರು ಚರ್ಚೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಭವಿಷ್ಯದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ತೊಂದರೆಯಾಗಬಹುದು. ಆದ್ದರಿಂದ ಪಿಜಿಯೋಥೆರಪಿ ಮೂಲಕವೇ ಗುಣಪಡಿಸಲು ದರ್ಶನ್ ಕೇಳಿಕೊಂಡಿದ್ದರು. ಆದರೆ ಇದೀಗ ಶಸ್ತ್ರಚಿಕತ್ಸೆ ಅನಿವಾರ್ಯ ಎನ್ನುವುದನ್ನು ವೈದ್ಯರು ದರ್ಶನ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.


ಶಸ್ತ್ರಚಿಕಿತ್ಸೆ ಎಂದು ಮಾಡಲಾಗುತ್ತದೆ ಎಂದು ತಿಳಿದು ಬಂದಿಲ್ಲ. ಪ್ರತಿ ವಾರದ ಬೆಳವಣಿಗೆಯನ್ನು ನ್ಯಾಯಾಲಯದ ಗಮನಕ್ಕೆ ತರಬೇಕಿದೆ.

More articles

Latest article