ಜೈಲಿನಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ಇನ್ನಿತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸಿಎಂ ತಾಕೀತು

ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಕಾಫಿ ಹೀರುತ್ತಾ, ಸಿಗರೇಟ್ ಸೇದುತ್ತಾ ಉಳಿದ ರೌಡಿ ಶೀಟರ್​ಗಳ ಜೊತೆ ಕುಳಿತು ದರ್ಶನ್ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತಿದ್ದಂತೆ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದಲ್ಲದೇ ನಟ ದರ್ಶನ್ ಇನ್ನಿತರರನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಈ ಕುರಿತು ಹೇಳಿಕೆ ಪ್ರಕಟಿಸಿರುವ ಅವರು, ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿದ್ದಾರೆ. ಅವರು ಜೈಲಿನಲ್ಲಿ ಸೊರಗಿ ಹೋಗಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಅವರನ್ನು ನೋಡಿಬಂದ ಅನೇಕರು ಕಣ್ಣೀರು ಹಾಕಿದ್ದರು. ಇದೆಲ್ಲವೂ ಸುಳ್ಳು ಅನ್ನೋದು ವೈರಲ್ ಆದ ಪೋಟೋದಲ್ಲಿ ಸ್ಪಷ್ಟವಾಗಿದೆ.

More articles

Latest article

Most read