9 ದಿನಗಳ ಬಳಿಕ ದರ್ಶನ್‌ನನ್ನು ನೋಡಲು ಬಂದ್ರ ಪತ್ನಿ ವಿಜಯಲಕ್ಷ್ಮಿ?

Most read

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಆತನ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಗಂಡ ದರ್ಶನ್‌ನನ್ನು ಭೇಟಿಯಾಗಲು ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಕೊಲೆ ಆರೋಪದಲ್ಲಿ ನಟ ದರ್ಶನ್ ಜೂ.11ರಂದು ಮಂಗಳವಾರ ಬಂಧನವಾಗಿದ್ದಾರೆ. ಈ ಕೇಸಿಗೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಆದರೆ, ತನ್ನ ಪತಿ ಪೊಲೀಸ್ ಕಸ್ಟಡಿ ಸೇರಿ 9 ದಿನಗಳ ನಂತರ ವಿಜಯಲಕ್ಷ್ಮೀ ತನ್ನ ಪತಿ ದರ್ಶನ್ ಭೇಟಿಯಾಗಲು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.

ಇನ್ನೊಂದೆಡೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ನೋಟಿಸ್ ಕೊಟ್ಟಿದ್ದಕ್ಕೆ ಠಾಣೆಗೆ ಬಂದಿದ್ದಾರ? ವಿಚಾರಣೆಗೆ ಹಾಜರಾಗಲು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೆ ನೋಟಿಸ್ ನೀಡಲಾಗಿತ್ತು. ಆ ಕಾರಣದಿಂದಲೇ ಅವರು ಠಾಣೆಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಜೂ.11ರಂದು ಮೈಸೂರಿನಲ್ಲಿ ಬಂಧನವಾದ ನಂತರ ಕೋರ್ಟ್ ಮುಂದೆ ಹಾಜರುಪಡಿಸಿದ್ದಾಗ 6 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿತ್ತು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಜೂ.16ರಂದು ಕೋರ್ಟ್‌ಗೆ ಹಾಜರುಪಡಿಸಿದಾಗ ಪುನಃ 5 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿತ್ತು. ಒಟ್ಟು 9 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ನಾಳೆ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಈ ವೇಳೆ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗಂಡನನ್ನು ನೋಡಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

More articles

Latest article