ದಸರಾ: ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಪ್ರತಾಪ ಸಿಂಹ

Most read

ಬೆಂಗಳೂರು: ಮೈಸೂರಿನಲ್ಲಿ ದಸರಾ ಉದ್ಘಾಟನೆಗೆ ಭರದ ಸಿದ್ದತೆಗಳು ಸಾಗಿವೆ. ಮತ್ತೊಂದು ಕಡೆ ಬೂಕರ್‌ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್‌ ಅವರಿಗೆ ವಿರೋಧ ವ್ಯಕ್ತವಾಗುತ್ತಲೇ ಇದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟು ಅವರ ಧರ್ಮವನ್ನು ಮುನ್ನೆಲೆಗೆ ತಂದು ದಿನಂಪ್ರತಿ ಟೀಕಿಸುತ್ತಲೇ ಇದೆ. ಇಂದು ಬಿಜೆಪಿ ಮುಖಂಡ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಮುಷ್ತಾಕ್ ಅವರಿಂದ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ನಡೆಯುವಾಗ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು ಮತ್ತು ವೇದ ಮಂತ್ರ, ಧಾರ್ಮಿಕ ಆಚರಣೆಗಳು ನಡೆಯಲಿವೆ. ಆದರೆ ಬಾನು ಮುಷ್ತಾಕ್ ಅವರು ಹಿಂದೂ ಮತ್ತು ಕನ್ನಡ ವಿರೋಧಿಯಾಗಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ಕ್ರಮವನ್ನು ಮೈಸೂರಿನ ರಾಜಮನೆತನದವರೂ ವಿರೋಧಿಸಿದ್ದಾರೆ.  ಹೀಗಾಗಿ ಬಾನು ಮುಷ್ತಾಕ್ ಅವ​ರಿಗೆ ನೀಡಿದ ಆಹ್ವಾನ ಹಿಂಪಡೆಯಬೇಕು ಎಂದು ಸರಕಾರಕ್ಕೆ ನಿರ್ದೇಶಿಸುವಂತೆ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

More articles

Latest article