1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ ರೀ ಓಪನ್ ಮಾಡಿದೆ.
ಸುಮಾರು 7 ವರ್ಷದ ಬಳಿಕ ದತ್ತಪೀಠ ಹೋರಾಟಗಾರರ ವಿರುದ್ಧ ಮರು ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬಿಜೆಪಿ ಸರ್ಕಾರ ಹಿಂಪಡೆದಿದ್ದ ಪ್ರಕರಣಕ್ಕೆ ಮರುಜೀವ ಬಂದಿದೆ. 2017ರಲ್ಲಿ ದತ್ತಪೀಠದಲ್ಲಿ ಗೋರಿ ಒಡೆದಿದ್ದ ಕೇಸ್ ನ್ನು, 2021ರಲ್ಲಿ ಬಿಜೆಪಿ ಸರ್ಕಾರ ಹಿಂಪಡೆದಿತ್ತು.
14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ ಮರು ತನಿಖೆ ಆರಂಭಗೊಂಡ ಬೆನ್ನಲ್ಲೆ ಹಿಂದೂ ಕಾರ್ಯಕರ್ತರಿಂದ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ತುಡಕೂರು ಮಂಜು, ಶಿವರಾಜ್, ಸಂದೇಶ್ ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್ ರಾಮು ಇವರುಗಳು ಕೇಸ್ ನಲ್ಲಿ ಇದ್ದಂತಹ ಆರೋಪಿಗಳು. ಬರುವ 8 ನೇ ತಾರೀಖು ಕೋರ್ಟ್ ಗೆ ಹಾಜರಾಗುವಂತೆ ಸರ್ಕಾರ ಸೂಚನೆ ನೀಡಿದೆ.
ಇದರ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಸಿ.ಟಿ.ರವಿ, ‘ಇದೊಂದು ಹಿಂದೂ ವಿರೋಧಿ ಸರ್ಕಾರ. ಇವರಿಗೆ ಹಿಂದೂ ಕಾರ್ಯಕರ್ತರೇ ಟಾರ್ಗೆಟ್. ಬಿಜೆಪಿಯಲ್ಲಿನ ಸಕ್ರಿಯ ಕಾರ್ಯಕರ್ತರೇ ಟಾರ್ಗೆಟ್’ ಎಂದು ವಾಗ್ದಾಳಿ ನಡೆಸಿದ್ದಾರೆ.