ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಾಳ ಜಲಾಶಯಕ್ಕೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಇಂದು ಮುಂಜಾನೆ ಮೂವರೂ ಬೈಕ್ ನಲ್ಲಿ ಜಲಾಶಯದ ಬಳಿ ಆಗಮಿಸಿದ್ದಾರೆ. ದಡದಲ್ಲಿ ಬೈಕ್ ನಿಲ್ಲಿಸಿ ಮೂವರೂ ಹಗ್ಗ ಕಟ್ಟಿಕೊಂಡು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಮಾರ್ಗದಲ್ಲಿ ಸಂಚರಿಸುವವರು ಬೈಕ್ ಮತ್ತು ಚಪ್ಪಲಿಗಳನ್ನು ಕಂಡು ಪರಿಶೀಲನೆ ನಡೆಸಿದ್ದಾರೆ. ಬೈಕ್ ನಲ್ಲಿ ಡೆತ್ ನೋಟ್ ಇರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೊಬ್ಬನ ಜತೆ ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.