ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಡಿಸಿಎಂ ಆಗಬೇಕು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಮಾತನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಆಡಿದ್ದಾರೆ.
ಇಂದು ತುಮಕೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮುನ್ನ ಡಿಸಿಎಂ ಹುದ್ದೆ ಸೃಷ್ಟಿಸಬೇಕು. ಇದರಲ್ಲಿ ನಮ್ಮ ವೈಯಕ್ತಿಕ ಹಿತಾಸಕ್ತಿ ಇಲ್ಲ. ಸೋತರೆ ಯಾಕೆ ಸೋತಿದ್ದು ಅಂತ ಹೈಕಮಾಂಡ್ ಕೇಳುತ್ತೆ. ಇದೆಲ್ಲಾ ಗಮನದಲ್ಲಿಟ್ಟುಕೊಂಡು ಈ ಸಲಹೆ ಕೊಟ್ಟದ್ದೇನೆ. ಈ ಸಂದರ್ಭದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
ಸಹಕಾರ ಸಚಿವ ರಾಜಣ್ಣ ಕೂಡ ಬಹಿರಂಗವಾಗೇ ಮೂರು ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಒತ್ತಾಯಿಸುತ್ತಿದ್ದಾರೆ. ವೀರಶೈವ ಲಿಂಗಾಯತ, ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ವರ್ಗದವರಿಗೆ ಡಿಸಿಎಂ ಹುದ್ದೆ ನೀಡಬೇಕು. ಇದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ. ಗುರುವಾರ ತುಮಕೂರಿನಲ್ಲಿ ಮತ್ತೆ ಇದೇ ಮಾತನ್ನು ಪುನರುಚ್ಚರಿಸಿದ್ದರು.
ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ನಮಗೆ ತಲೆ ಕೆಟ್ಟಿಲ್ಲ. ನಮ್ಮಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ ಎಂದ ರಾಜಣ್ಣ ಸ್ಪಷ್ಟ ಪಡಿಸಿದ್ದಾರ.