ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ ನಿರ್ಧಾರ

Most read

ಬೆಂಗಳೂರು: ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ 694 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇರುವ 1611.49 ಕಿ.ಮೀ ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆ ಜಾಲದ ಕೆಲವು ರಸ್ತೆಗಳು ಹಾಳಾಗಿದ್ದು, ವ್ಯಾಪಕ ಸಾರ್ವಜನಿಕ ಟೀಕೆಗೆ ಗುರಿಯಾಗುತ್ತಿದೆ. ತುರ್ತು ಅಭಿವೃದ್ಧಿಯಿಂದ ಸುಗಮ ಸಂಚಾರ ಉಂಟಾಗಿ ವಾಹನ ಸಾಂದ್ರತೆ ಕಡಿಮೆಯಾಗುವ ನಿರೀಕ್ಷೆ ಹೊಂದಿದೆ. ಆದ್ದರಿಂದ ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ.ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ರೂ.694 ಕೋಟಿಗಳ ಮೊತ್ತವನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿ.ಬಿ.ಎಂ.ಪಿ.ಯ ಆಯವ್ಯಯದಲ್ಲಿ 2024-25ನೇ ಸಾಲಿನಲ್ಲಿ ರೂ.300 ಕೋಟಿ ಹಾಗೂ 2025-26 ಸಾಲಿನಲ್ಲಿ ರೂ.398 ಕೋಟಿಗಳನ್ನು ಭರಿಸಿಕೊಳ್ಳಲು ಸಂಪುಟ ಸಮ್ಮತಿ ನೀಡಿದೆ.

More articles

Latest article