ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಪಪ್ರಚಾರ ; ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Most read

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸುದ್ದಿಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ ಅಂಗವಾಗಿ ಮೇ.20ರಂದು ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದ ಬಿಜೆಪಿ, ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯ ಬಗ್ಗೆ ಆರೋಪ ಪಟ್ಟಿ ಎಂಬ ಶೀರ್ಷಿಕೆಯ ಅಡಿ ಮಾಧ್ಯಮಗಳಲ್ಲಿ ಪ್ರಚಾರ ಮಾಡಿತ್ತು.

ಬಿಜೆಪಿಯ ಆರೋಪಗಳನ್ನು ತಳ್ಳಿ ಹಾಕಿರುವ ರಾಜ್ಯ ಸರ್ಕಾರ, ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ತೀರ್ಮಾನಿಸಿದೆ.

ಸರ್ಕಾರವು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಸರ್ಕಾರಿ ಅಭಿಯೋಜಕರಿಗೆ ಅಗತ್ಯವಿರುವ ಮಾಹಿತಿ ಒದಗಿಸಲು ಉಪ ಕಾರ್ಯದರ್ಶಿ (ಗೃಹ- ಕಾನೂನು ಮತ್ತು ಸುವ್ಯವಸ್ಥೆ) ಕುಮಟಾ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲ ಬಿಎಸ್ ಪಾಟೀಲ್ ಮತ್ತು ಬೆಂಗಳೂರಿನ 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾದ ಶೈಲಜಾ ನಾಯಕ್ ಅವರನ್ನು ನಿಯೋಜಿಸಲಾಗಿದೆ.

ಇಲಾಖೆಯ ಅಧಿಸೂಚನೆಯ ಪ್ರಕಾರ, ಸರ್ಕಾರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕಾರ್ಯದರ್ಶಿಗೆ ದೂರು ಸಲ್ಲಿಸಲು ಅಧಿಕಾರ ನೀಡಿದೆ.

More articles

Latest article