ದೆಹಲಿ ಅಬಕಾರಿ ನೀತಿ ಕೇಸ್: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

Most read

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದೆ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ ಎಂದು ಕೋರ್ಟ್ ತಿಳಿಸಿದೆ.

ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದ ನಂತರ ಕೇಜ್ರಿವಾಲ್ ಅವರಿಗೆ ಬಿಡುಗಡೆ ಭಾಗ್ಯ ದೊರಕಿದೆ.

More articles

Latest article