Saturday, December 7, 2024

ತೆರಿಗೆ ಹಂಚಿಕೆ ತಾರತಮ್ಯ: ಕರ್ನಾಟಕ ನಂತರ ದೆಹಲಿಯಲ್ಲಿ ಕೇಂದ್ರದ ವಿರುದ್ಧ ಕೇರಳ ಸರ್ಕಾರ ಪ್ರತಿಭಟನೆ

Most read

ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸರಕಾರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಫೆಬ್ರುವರಿ 8 ರಂದು (ಗುರುವಾರ) ಜಂತರ್ ಮಂತರ್‌ನಲ್ಲಿ ಕೇರಳ ಸರ್ಕಾರವು ಕೇಂದ್ರದ ವಿರುದ್ಧ ಪ್ರತಿಭಟನೆ ಆಯೋಜಿಸಿದೆ. ತೆರಿಕೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಾ ಒಕ್ಕೂಟ ವ್ಯವಸ್ಥೆಯನ್ನು ಬುಡಮೆಲು ಮಾಡುತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ತಮ್ಮ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್, ಕೇಂದ್ರದ ತಾರತಮ್ಯದ ಪರಿಣಾಮ ರಾಜ್ಯ ಆರ್ಥಿಕವಾಗಿ ಮುಗ್ಗಟ್ಟು ಅನುಭವಿಸುತ್ತಿದ್ದು, ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಕ್ರಮಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಗಳು ಉತ್ತರ-ದಕ್ಷಿಣ ಎಂಬ ವಿಭಜನೆಯನ್ನು ಉತ್ತೇಜಿಸುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ರಾಜ್ಯದ ಜನರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಇಲ್ಲಿದ್ದೇವೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೆರಿಗೆಯ ಪಾಲನ್ನು ನೀಡುತ್ತಿಲ್ಲ ಮತ್ತು ಸರ್ಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬಳಸಲಾಗುತ್ತಿದೆ ಎಂದು

 ಪ್ರತಿಭಟನನೆಯಲ್ಲಿ ಪಾಲ್ಗೊಂಡಿದ್ದ ದೆಹಲಿ ಸಿಎಂ ಅರವಿಂಗ್ ಕೆಜ್ರಿವಾಲ್ ಮಾತನಾಡಿ, ವಿಜಯನ್ ತನ್ನ ಕುಟುಂಬಕ್ಕಾಗಿ ಹಣವನ್ನು ಕೇಳಲು ಇಲ್ಲಿಗೆ ಬಂದಿಲ್ಲ. ಅವರು ಕೇರಳಕ್ಕೆ ಬರಬೇಕಾದ ತೆರಿಕೆ ಹಂಚಿಕೆಗಳನ್ನು ಪಡೆಯಲು ಇಲ್ಲಿಗೆ ಬಂದಿದ್ದಾರೆ. ಕೇಂದ್ರವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ಬಳಸಿಕೊಂಡು ಪ್ರತಿಪಕ್ಷ ಆಡಳಿತದ ಸರ್ಕಾರಗಳಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.

ಪ್ರತಿಪಕ್ಷ ನಾಯಕರ ಬಂಧನವನ್ನು ಉಲ್ಲೇಖಿಸಿದ ಅವರು, ಇದು ಪ್ರತಿಪಕ್ಷಗಳ ಪ್ರತಿರೋದವನ್ನು ಹತ್ತಿಕ್ಕಲು ಬಿಜೆಪಿ ಈರೀತಿ ತಂತ್ರವನ್ನು ಮಾಡುತ್ತಿದ. ನಾವು ವಿರೋಧ ಪಕ್ಷಗಳು ಈ ದೇಶದ 70 ಕೋಟಿ ಜನರನ್ನು ಪ್ರತಿನಿಧಿಸುತ್ತೇವೆ. ನೀವು ಈ ರಾಜ್ಯಗಳನ್ನು ನಿಮ್ಮ ಶತ್ರುಗಳೆಂದು ಪರಿಗಣಿಸುತ್ತೀರಾ? “ಫೆಡರಲ್ ಹಕ್ಕುಗಳ ಮೇಲಿನ ದಾಳಿಗಳ” ಬಗ್ಗೆ ವಿವರಣೆ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಪ್ರತಿಭಟನೆಯನ್ನು ಉದ್ಘಾಟಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಲ್ಲದೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಹಿರಿಯ ರಾಜಕೀಯ ನಾಯಕರಾದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ರಾಜ್ಯಸಭಾ ಸದಸ್ಯ ಮತ್ತು ವಕೀಲ ಕಪಿಲ್ ಸಿಬಲ್, ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಪಳನಿವೇಲ್ ತ್ಯಾಗ ರಾಜನ್ ಮತ್ತು ಹಲವಾರು ಸಚಿವರು, ಸಂಸದರು ಮತ್ತು ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್)ಗೆ ಸೇರಿದ ಶಾಸಕರು ಕೂಡ ಕೂಟದಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಹೊರತುಪಡಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

More articles

Latest article