ದೆಹಲಿಯಲ್ಲಿ CWC ಸಭೆ: ವಿಪಕ್ಷ ನಾಯಕ ಸ್ಥಾನ ವಹಿಸಲು ರಾಹುಲ್ ಗಾಂಧಿಗೆ ಒತ್ತಡ

Most read

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್ ಲೋಕಸಭೆಯಲ್ಲಿ 99 ಸ್ಥಾನಗಳನ್ನು ಪಡೆದಿದ್ದು 2014ರಿಂದ ಅತಿ ಹೆಚ್ಚಿನ ಸ್ಥಾನಗಳ ಗೆಲುವು ಈ ಬಾರಿ ಕಂಡಿದೆ. ಇಂದು ಶನಿವಾರ ಸಂಜೆ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ದೆಹಲಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಬೆಳಗ್ಗೆ ದೆಹಲಿಯ ಅಶೋಕ ಹೊಟೇಲ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ.

ಅದರಲ್ಲಿ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಪಕ್ಷದ ನಾಯಕರು ಪ್ರಬಲವಾಗಿ ಪ್ರಸ್ತಾಪ ಮಂಡಿಸಲಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷಕ್ಕೂ ಮುಂದಿನ ದಿನಗಳಲ್ಲಿ ಬಲವಾಗಲಿದೆ ಎಂಬ ಮಾತು ಬಹುತೇಕ ಕಾಂಗ್ರೆಸ್ ನಾಯಕರದ್ದಾಗಿದೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳಿಂದ ಗೆದ್ದಿರುವ ರಾಹುಲ್ ಗಾಂಧಿ ಅವರಿಗೆ ಸಿಪಿಪಿ ಸಭೆ ಮತ್ತು ದೆಹಲಿಯಲ್ಲಿ ನಡೆಯುತ್ತಿರುವ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಲು ಕಾಂಗ್ರೆಸ್ ನ ಹಿರಿಯ ನಾಯಕರು ತೀವ್ರ ಒತ್ತಡ ಹೇರಲಿದ್ದಾರೆ ಎಂದು ಪಕ್ಷದ ಮೂಲಗಳು ಸೂಚಿಸುತ್ತವೆ.

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರೇ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ, ಏಕೆಂದರೆ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷದ ಅಗತ್ಯ ಸಂಖ್ಯೆಯ ಸ್ಥಾನಗಳನ್ನು ಪಡೆದುಕೊಂಡಿದೆ.

More articles

Latest article