ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ನ.25 ಮುಂದೂಡಿಕೆ

Most read

ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು ಬಂಧಿಸಿ ಜೈಲಿನಲ್ಲಿ ರಿಸಿದ್ದು, ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ನವೆಂಬರ್ 25 ರಂದು ವಿಚಾರಣೆ ನಡೆಸುವುದಾಗಿ ಮುಂದೂಡಿದೆ.

ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಇಂದು ವಿಚಾರಣೆ ಆಲಿಸಲು ಕುಳಿತುಕೊಳ್ಳದ ಕಾರಣ ಪ್ರಕರಣಗಳನ್ನು ಮುಂದೂಡಲಾಗಿದೆ. ಹೊಸ ಪೀಠದ ಮುಂದೆ ಹೊಸ ವಿಚಾರಣೆಗಾಗಿ ಇಂದು ವಿಷಯಗಳನ್ನು ಪಟ್ಟಿ ಮಾಡಲಾಗಿದೆ. ಆದರೆ, ಇಂದು ಪೀಠವು ಕುಳಿತುಕೊಳ್ಳದ ಕಾರಣ, ಕೋರ್ಟ್ ಮಾಸ್ಟರ್ ಈ ಪ್ರಕರಣದ ಮುಂದಿನ ವಿಚಾರಣೆಗೆ ದಿನಾಂಕವನ್ನು ನೀಡಿದ್ದಾರೆ.

ಫೆಬ್ರವರಿ 2020 ರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿತ್ತು.53 ಜನರನ್ನು ಬಲಿತೆಗೆದುಕೊಂಡರು. ಈ ಗಲಭೆಯ “ಮಾಸ್ಟರ್‌ಮೈಂಡ್‌ಗಳು” ಎಂದು ಆರೋಪಿಸಿ ಖಾಲಿದ್, ಇಮಾಮ್ ಮತ್ತು ಇತರರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತು ಈ ಘಟನೆಯಿಂದಾಗಿ 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

More articles

Latest article