ದೆಹಲಿ ಬಾಂಬ್‌ ಸ್ಪೋಟ: ಅಪರಾಧಿಗಳಿಗೆ ಶಿಕ್ಷೆ ಖಚಿತ: ರಕ್ಷಣಾ ಸಚಿವ ರಾಜನಾಥ ಸಿಂಗ್‌ ಎಚ್ಚರಿಕೆ

Most read

ದೆಹಲಿ: ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಗುಡುಗಿದ್ದಾರೆ.

ಈ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ತ್ವರಿತ ಹಾಗೂ ಸಮಗ್ರ ತನಿಖೆ ನಡೆಸುತ್ತಿವೆ. ತನಿಖೆಯ ವಿವರಗಳನ್ನು ಆದಷ್ಟೂ ತ್ವರಿತವಾಗಿ ಬಹಿರಂಗಪಡಿಸಲಾಗುತ್ತದೆ. ಸ್ಫೋಟಕ್ಕೆ ಯಾರೇ ಕಾರಣರಾಗಿದ್ದರೂ ಅವರನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ನಾನು ದೇಶದ ಜನತೆಗೆ ಭರವಸೆ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.

ಸ್ಫೋಟದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ರಾಜನಾಥ ಸಿಂಗ್‌ ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

More articles

Latest article