CEC ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹ : ದೆಹಲಿಯ ಜಂತರ್‌ ಮಂತರ್‌ನಲ್ಲಿ CJP ಪ್ರತಿಭಟನೆ

ನವದೆಹಲಿ :  ಮತದಾರರ ಪಟ್ಟಿಯಲ್ಲಿನ ಅಕ್ರಮಗಳು ಮತ್ತು ‘ಎಸ್‌ಐಆರ್’ (SIR) ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನಿರ್ವಹಿಸಿದ ರೀತಿಯ ಬಗ್ಗೆ ಆರೋಪಿಸಿ, ಮುಖ್ಯ ಚುನಾವಣಾ ಆಯಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ  ಆಗ್ರಹಿಸಿ cjp ಕಾರ್ಯಕರ್ತರು ಮತ್ತು ವಿದ್ಯಾರ್ಥಿ ನಾಯಕರ ಗುಂಪುಗಳು ಗಾಂಧಿ ಜಯಂತಿಯಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಈ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರೂ, ಆಯೋಜಕರು ಅದನ್ನು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸುಮಾರು 3,000 ರಿಂದ 4,000 ಜನರು ಸೇರುವ ನಿರೀಕ್ಷೆಯಿರುವುದರಿಂದ ನವದೆಹಲಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸಿಎಪಿಎಫ್ (CAPF) ಸಿಬ್ಬಂದಿಯ ನಿಯೋಜನೆ, ಬ್ಯಾರಿಕೇಡ್‌ಗಳ ಅಳವಡಿಕೆ ಮತ್ತು ಪ್ರಮುಖ ಪ್ರವೇಶ ಹಾಗೂ ನಿರ್ಗಮನ ಸ್ಥಳಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಎಎಪಿ (AAP) ನಾಯಕರು ಮತ್ತು ಕಾರ್ಯಕರ್ತರು, ಇಂಡಿಯನ್ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಇತರರು ಕೂಡ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸೆಕ್ಷನ್ 163ರ ಅಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ನಡುವೆಯೇ, ಜಂತರ್ ಮಂತರ್ ಪ್ರದೇಶದಲ್ಲಿ ಅಂತರ್ಜಾಲ ಸೇವೆಗೆ ಅಡಚಣೆ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಶುಕ್ರವಾರ ದೆಹಲಿ ಮೆಟ್ರೋ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಜಂತರ್ ಮಂತರ್ ಸೇರಿದಂತೆ 11 ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನವನ್ನು ಸ್ಥಗಿತಗೊಳಿಸಿತು.

ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ರಾಜೀವ್ ಚೌಕ್, ಸೇವಾ ತೀರ್ಥ, ಮಂಡಿ ಹೌಸ್, ಲೋಕ್ ಕಲ್ಯಾಣ್ ಮಾರ್ಗ್, ಐಎನ್‌ಎ (INA), ಚಾವ್ರಿ ಬಜಾರ್, ರಾಮಕೃಷ್ಣ ಆಶ್ರಮ ಮಾರ್ಗ್ ಮತ್ತು ನವದೆಹಲಿ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನವು ಮುಂದಿನ ಸೂಚನೆ ಬರುವವರೆಗೆ ಮುಚ್ಚಲ್ಪಟ್ಟಿರುತ್ತದೆ ಎಂದು ಡಿಎಂಆರ್‌ಸಿ (DMRC) ‘ಎಕ್ಸ್’ (X) ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಆದಾಗ್ಯೂ, ರಾಜೀವ್ ಚೌಕ್, ಮಂಡಿ ಹೌಸ್, ನವದೆಹಲಿ ಮತ್ತು ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಗಳಲ್ಲಿ ಮಾರ್ಗ ಬದಲಾಯಿಸುವ (ಇಂಟರ್‌ಚೇಂಜ್) ಸೌಲಭ್ಯ ಲಭ್ಯವಿರುತ್ತದೆ ಎಂದು ಅದು ಹೇಳಿದೆ.

More articles

Latest article

Most read