ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಲು ಮನವಿ

Most read

ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಡಾ.ವಿಷ್ಣುವರ್ಧನ್ ಅವರಿಗೆ 75 ವರ್ಷ ತುಂಬುತಿರುವ ಹಿನ್ನೆಲೆಯಲ್ಲಿ ಈ ಮನವಿ ಸಲ್ಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ರಸ್ತೆಗೆ ನಾಮಕರಣ ಮಾಡುವಂತೆಯೂ ಅವರು ಮನವಿ ಸಲ್ಲಿಸಿದರು.

ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ಹತ್ತು ಗುಂಟೆ ಭೂಮಿ ನೀಡುವಂತೆ ನಾಳೆ ವಿಷ್ಣುವರ್ಧನ್‌ ಅವರ ಪತ್ನಿ ಭಾರತಿ, ಅಳಿಯ ಅನಿರುಧ್‌ ಮತ್ತಿತರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ.

More articles

Latest article