ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಂದಾಗಿ ಆರು ವರ್ಷದ ಬಾಲಕಿ ಸಾನಿಯಾ ಮೃತಪಟ್ಟಿದ್ದಾಳೆ. ಸಾನಿಯಾ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ.
ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.
ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಆಸಿಫ್ ಬೇಸರ ವ್ಯಕ್ತಪಡಿಸಿದ್ದಾರೆ, ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಬೇಸರ ಹೊರಹಾಕಿದ್ದಾರೆ.