ರಾಜ್ಯದಲ್ಲಿ ಡೆಂಗ್ಯು ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಅಡಿಯಲ್ಲಿ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಅಧಿಸೂಚನೆ ಹೊರಡಿಸಲಾಗಿದೆ.
ಮೈತಾಪಮಾನ ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ ಮತ್ತು ವಾಕರಿಕೆ ಕಾಣಿಸಿಕೊಳ್ಳುವುದು ಡೆಂಗ್ಯೂ ರೋಗದ ಪ್ರಮುಖ ಲಕ್ಷಣಗಳಾಗಿದೆ.
ಡೆಂಗ್ಯು ಜ್ವರವನ್ನು ತಡೆಯಲು ನಿರ್ದಿಷ್ಟವಾದ ಚಿಕಿತ್ಸೆಯಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ತೆರೆದಿಟ್ಟ ನೀರಿನ ತೊಟ್ಟಿ ವಾರಕ್ಕೊಮ್ಮೆ ಖಾಲಿ ಮಾಡುವುದು, ತೊಳೆದು ಭರ್ತಿ ಮಾಡಿ ಮುಚ್ಚುವುದು. ಮನೆ ಸುತ್ತಮುತ್ತ ಬಯಲಲ್ಲಿ ಬಿಸಾಡಿದ ತೆಂಗಿನ ಚಿಪ್ಪು, ಬಿಸಾಡಿದ ಟೀ ಗ್ಲಾಸ್ ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸುವ ಮೂಲಕ ಡೆಂಗ್ಯು ತಡೆಗಟ್ಟಬಹುದಾಗಿದೆ.