ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಆರಂಭವಾಗಿದೆ. ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.