ಚರಕ ತಿರುಗಿಸಿದ ಡಿಸಿಎಂ ಡಿಕೆ ಶಿವಕಮಾರ್

Most read

ಬೆಳಗಾವಿ: 100 ವರ್ಷಗಳ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಬೆಳಗಾವಿ ತಿಲಕವಾಡಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಡಿಸಿಎಂ ಅವರು ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ ಅವರು ಚರಕ ತಿರುಗಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹಿರಿಯ ಮುಖಂಡ ಆರ್ ವಿ ದೇಶಪಾಂಡೆ, ಸಚಿವರಾದ ಎಂ ಬಿ ಪಾಟೀಲ್, ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಉಪಸ್ಥಿತರಿದ್ದರು.

More articles

Latest article