ಚೆನ್ನೈ: ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕಳೆದ ವರ್ಷ ವೈಕಂ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ನಡೆದ ಸಮಾರಂಭದಲ್ಲಿ ಶೋಷಿತರ ಏಳಿಗೆಗೆ ಶ್ರಮಿಸಿದ ಗಣ್ಯರಿಗೆ ಈ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದರು. ಈ ಪ್ರಶಸ್ತಿಯು 1 ಲಕ್ಷ ರೂ. ಮತ್ತು ಪದಕವನ್ನು ಒಳಗೊಂಡಿರುತ್ತದೆ.
ಮಹಾದೇವ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2011ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇವರ ಕುಸುಮಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದಲ್ಲದೇ ಒಡಲಾಳ, ಎದೆಗೆ ಬಿದ್ದ ಅಕ್ಷರ, ಆರ್‌ಎಸ್‌ಎಸ್: ಆಳ ಮತ್ತು ಅಗಲ, ಮೊದಲಾದ ಕೃತಿಗಳು ಜನಪ್ರಿಯವಾಗಿವೆ.