Monday, May 20, 2024

ಪ್ರಜ್ವಲ ಕಾಂಡ ವರದಿ ಮಾಡುವಾಗ ತಮ್ಮ ಹೆಸರು ಬಳಸದಂತೆ ತಡೆಯಾಜ್ಞೆ ಪಡೆದ ದೇವೇಗೌಡ, ಕುಮಾರಸ್ವಾಮಿ

Most read

ಬೆಂಗಳೂರು: ಸಂಸದ, ಹಾಸನದ   ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಮತ್ತು ಆತ ಎಸಗಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಬಳಸಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೆಷನ್ಸ್ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಸುದ್ದಿ ಮಾಧ್ಯಮಗಳು ಪ್ರಜ್ವಲ್ ರೇವಣ್ಣ ಕುರಿತ ಸುದ್ದಿಗಳನ್ನು ಪ್ರಸಾರ ಮಾಡುವಾಗ ತಮ್ಮ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಬೇಕು ಎಂದು ಪ್ರಜ್ವಲನ ಚಿಕ್ಕಪ್ಪ ಕುಮಾರಸ್ವಾಮಿ ಹಾಗು ಅಜ್ಜ ಎಚ್.ಡಿ.ದೇವೇಗೌಡರು ನ್ಯಾಯಾಲಯದ ಮೊರೆ ಹೋಗಿದ್ದರು.

ಉಭಯ ನಾಯಕರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಪ್ರಜ್ವಲ್ ಪ್ರಕರಣ ವರದಿ ಮಾಡುವಾಗ ಇಬ್ಬರು ನಾಯಕರ ಹೆಸರು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಪ್ರಜ್ವಲ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಹಗರಣದಿಂದ ಅಂತರ ಕಾಪಾಡಿಕೊಳ್ಳಲು ಪ್ರಯತ್ನಿಸಿದ್ದರು. ರೇವಣ್ಣ ಅವರ ಕುಟುಂಬವೇ ಬೇರೆ, ನಮ್ಮ ಕುಟುಂಬವೇ ಬೇರೆ, ನಾವು ಬೇರೆಯಾಗಿ ಬಹಳ ದಿನಗಳಾದವು ಎಂದು ಅವರು ಹೇಳಿದ್ದಲ್ಲದೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದರು.

ಪ್ರಜ್ವಲ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಈಗಾಗಲೇ ಆತನ ತಂದೆ, ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನಗಳ ಪೊಲೀಸ್ ಕಸ್ಟಡಿ ಪಡೆಯಲಾಗಿದೆ.

ಇಂದು ಎಚ್.ಡಿ. ರೇವಣ್ಣ ಅವರ ಬಸವನಗುಡಿ ನಿವಾಸದಲ್ಲಿ SIT ಪೊಲೀಸರು ಸುದೀರ್ಘ  ಮಹಜರು ನಡೆಸಿದರು. ರೇವಣ್ಣ ನಿವಾಸದಲ್ಲಿ ಸಂತ್ರಸ್ಥೆ ಸಮ್ಮುಖದಲ್ಲೇ ಮೂರುವರೆ ಗಂಟೆಗಳ ಕಾಲ ಮಹಜರು ನಡೆಸಲಾಯಿತು.

More articles

Latest article