ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಇಂದು ಸಂಜೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ ಸಲೀಂ ಅವರನ್ನು ನೇಮಿಸಿದ್ದು ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಪಡೆದ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸೇವಾ ಹಿರಿತನ ಆಧಾರದ ಮೇರೆಗೆ ಡಿಜಿ-ಐಜಿಪಿ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ಆಕಾಂಕ್ಷಿಗಳಾಗಿದ್ದರು.
ಸೇವಾ ಹಿರಿತನದ ಮಾನದಂಡದಲ್ಲಿ ಡಿಜಿ ಐಪಿಪಿ ಹುದ್ದೆಗೆ ಪ್ರಶಾಂತ್ ಕುಮಾರ್ ಠಾಕೂರ್ ಮುಂಚೂಣಿಯಲ್ಲಿದ್ದು,ಎರಡನೇ ಸ್ಥಾನದಲ್ಲಿ ಸಲೀಂ ಅವರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂ.ಎ.ಸಲೀಂ ಅವರನ್ನು ಆಯ್ಕೆ ಮಾಡಿದೆ.
ಕಳೆದ ಏ.30 ರಂದು ಅಲೋಕ್ ಮೋಹನ್ ಅವರು ನಿವೃತ್ತರಾಗಬೇಕಿತ್ತು. ಆದರೆ ಮೇ 21ರವರೆಗೆ ಡಿಜಿ-ಐಜಿಪಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿತ್ತು. ಹೀಗಾಗಿ ಎರಡು ವರ್ಷಗಳ ಸೇವಾವಧಿ ನಂತರ ಹಾಲಿ ಡಿಜಿ-ಐಜಿಪಿ ಅಲೋಕ್ ಮೋಹನ್ ಇಂದು ನಿವೃತ್ತರಾಗಿದ್ದಾರೆ.