ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ರಾಸಲೀಲೆ ಪ್ರಕರಣ: ವರದಿನೀಡಲು ಗೃಹ ಇಲಾಖೆಗೆ ಸಿಎಂ ಸೂಚನೆ

Most read

ಬೆಳಗಾವಿ:  ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್​​ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆ ಮಹಿಳೆಯನ್ನು ತಬ್ಬಿಕೊಂಡಿರುವ ವಿಡಿಯೋ ವೈರಲ್‌ ಆಗಿದ್ದು ಸಂಚಲನ ಸೃಷ್ಟಿಸಿದೆ. ಬಲ್ಲ ಮೂಲಗಳ ಪ್ರಕಾರ ಇದು ಒಂದು ವರ್ಷದ ಹಿಂದಿನ ವಿಡಿಯೋ ಎಂದು ಹೇಳಲಾಗುತ್ತಿದೆ.

ಈ ಪ್ರಕರಣ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಡಿಯೋ ಕುರಿತು ಇಂದು ಬೆಳಗ್ಗೆಯಷ್ಟೇ ನನ್ನ ಗಮನಕ್ಕೆ ಬಂದಿದೆ. ಈ ಅಧಿಖಾರಿ ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಕಣ ಕುರಿತು ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಈಗಾಗಲೇ ಸೂಚಿಸಿದ್ದೇನೆ ಎಂದರು.

ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಈ ರಾಮಚಂದ್ರರಾವ್.‌ ಇದೇ ಪ್ರಕಣದಲ್ಲಿ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಅವರನ್ನು ರಾಜ್ಯ ಸರ್ಕಾರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮರುನೇಮಕ ಮಾಡಲಾಗಿತ್ತು.

ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ರಾಮಚಂದ್ರರಾವ್ ಅವರೂ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿ, ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ‌ ಆಗಲಿದೆ.‌ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದರೆ ಎಷ್ಟೇ ದೊಡ್ಡ ಅಧಿಕಾರಿ ಆಗಿದ್ದರೂ ಕ್ರಮವಾಗುತ್ತದೆ ಎಂದರು.

ಈ ಮಧ್ಯೆ ಡಿಜಿಪಿ ರಾಮಚಂದ್ರ ರಾವ್ ಅವರು ಪರಮೇಶ್ವರ್  ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ ಅನಾರೋಗ್ಯ ಹಿನ್ನೆಲೆಯಲ್ಲಿ ಸಚಿವರು ಇವರನ್ನು ಭೇಟಿಯಾಗಿಲ್ಲ. ಆದರೆ ಸಚಿವರು ರಾಸಲೀಲೆ ಪ್ರಕರಣ ಕುರಿತು ಡಿಜಿಪಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ವಿಡಿಯೋ ಕುರಿತು ಸಂಪೂರ್ಣ ವಿವರಣೆ ನೀಡುವಂತೆ ಸೂಚನೆ ನಿಡಿದ್ದು, ವರದಿ ಆಧರಿಸಿ ಕ್ರಮಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ.

More articles

Latest article