ಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕೆಲಸಕ್ಕೆ ನೀರಿನ ಒರತೆ ಅಡ್ಡಿ: ಜೆಸಿಬಿ ಸಹಾಯ ಪಡೆದ ಎಸ್‌ ಐಟಿ

Most read

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ.

ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ ಪಕ್ಕದಲ್ಲೇ ಇದೆ. ನದಿಗೂ ಈ ಜಾಗಕ್ಕೂ ಕೇವಲ 10 ಮೀಟರ್ ಅಂತರವಿದ್ದು, ಭೂಮಿಯನ್ನು ಅಗೆದಂತೆಲ್ಲಾ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯಲಾಗುತ್ತಿದೆ ಎಂದು ಎಸ್‌ ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ದೂರುದಾರ ತೋರಿಸಿದ ಮೊದಲ ಜಾಗದಲ್ಲಿ ಭೂಮಿಯನ್ನು ಅಗೆಯುವ ಕಾರ್ಯವನ್ನು ಮಧ್ಯಾಹ್ನ 12 ಗಂಟೆ ವೇಳೆಗೆ ಆರಂಭಿಸಲಾಗಿತ್ತು. ಸುಮಾರು 3 ಅಡಿ ಆಳದವರೆಗೆ ಅಗೆಯಲಾಗಿತ್ತು. ಆದರೆ ಮೃತದೇಹದ ಯಾವುದೇ ಕುರುಹು ಪತ್ತೆಯಾಗಿಲ್ಲ. ಮಣ್ಣಿನಿಂದಲೂ ನೀರುಉಕ್ಕುತ್ತಿದೆ. ಇದು ಸಮಸ್ಯೆಯಾಗಿ ಪರಿಣಮಿಸಿದೆ.

ಸಾಕ್ಷಿ ದೂರುದಾರನಿಗೆ ಸಂತೃಪ್ತಿಯಾಗುವವರೆಗೆ ಹಾಗೂ ನಮಗೆ ಇನ್ನು ಅಗೆಯುವ ಅಗತ್ಯವಿಲ್ಲ ಎಂದು ಮನವರಿಕೆ ಆಗುವವರೆಗೆ ಅಗೆಯುವ ಕಾರ್ಯ ಮುಂದುವರಿಸಲಿದ್ದೇವೆ. ಒಂದು ಜಾಗದಲ್ಲಿ ಅಗೆಯುವ ಕಾರ್ಯವನ್ನು ಪೂರ್ಣಗೊಳಿಸದ ಬಳಿಕವೇ ಎರಡನೇ ಜಾಗದಲ್ಲಿ ಅಗೆಯುವ ಕಾರ್ಯ ಆರಂಭಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಸ್‌ಐಟಿಯ ಡಿಐಜಿ ಎಂ.ಎನ್.ಅನುಚೇತ್ ಹಾಗೂ ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

More articles

Latest article