ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಲ್ಲಿ ಅಸುನೀಗಿದವರ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ವಿಚಾರಣೆ ನಡೆಸಲು ಬೆಳ್ತಂಗಡಿ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಅನುಮತಿ ನೀಡಿದೆ.
ಚಿನ್ನಯ್ಯನನ್ನು ವಿಚಾರಣೆಗೆ ಎರಡು ದಿನ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡಲಾಗಿದೆ ಎಂದು ಎಸ್‌ಐಟಿ ಮೂಲಗಳು ಖಚಿತಪಡಿಸಿವೆ. ಎಸ್ ಐಟಿಯು ಚಿನ್ನಯ್ಯನನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮೊದಲಿನ ವಿಚಾರಣೆಗಳಲ್ಲಿ ಸಾಕ್ಷಿ ದೂರುದಾರನಿಂದ ಅನೇಕ ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ಆತನನ್ನು ಮನ್ನಷ್ಟು ವಿಚಾರಣೆಗೆ ಒಳಪಡಿಸಿದರೆ ಮಹತ್ವದ ಮಾಹಿತಿಗಳು ಲಭ್ಯವಾಗಲಿವೆ ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.