ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಗೃಹ ಸಚಿವ ಪರಮೇಶ್ವರ್‌

Most read

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ  ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಆಗುವುದಿಲ್ಲ. ತನಿಖೆ ಪೂರ್ಣಗೊಂಡು ವರದಿ ನೀಡಿದ ನಂತರ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಯಾರ ಯಾರ ಪಾತ್ರ ಇದೆ, ಇಲ್ಲ ಎನ್ನುವುದನ್ನು ಕುರಿತು ತನಿಖೆ ಮುಂದುವರೆದಿದೆ.

ಅಂತಿಮವಾಗಿ ಸತ್ಯಾಂಶ ಹೊರಬೀಳಲಿದೆ. ತನಿಖೆ ನಡೆಯುವಾಗ ನಾನು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಯಾರೊಬ್ಬರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಪ್ರಕರಣ ಕುರಿತು ಕಾಂಗ್ರೆಸ್‌ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ಕೆಲವು ಸಾಹಿತಿ, ಚಿಂತಕರು ಪ್ರಗತಿಪರರು ಪತ್ರ ಬರೆದಿರುವು ವಿಷಯ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು..

ಮದ್ದೂರಿನಲ್ಲಿ ಗಣೇಶೋತ್ಸವ ವೇಳೆ ಕೆಲವು ಭಾಗಗಳಲ್ಲಿ ಕಲ್ಲುತೂರಾಟ ನಡೆದಿದ್ದು, ಈಗಾಗಲೇಕೆಲವರನ್ನು ಬಂಧಿಸಲಾಗಿದೆ. ಕೆಲವು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿವೆ. ಸಧ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು.

More articles

Latest article