ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್ ಐಟಿ) ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದೆ. ಇಂದು ಮಧ್ಯಾಹ್ನ ಈ ತಂಡ ಬೆಂಗಳೂರಿನಿಂದ ಧರ್ಮಸ್ಥಳದತ್ತ ಹೊರಟಿದೆ ಎಂದು ತಿಳಿದು ಬಂದಿದೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಎಸ್ ಐಟಿ ರಚನೆಯಾಗಿದೆ.
ಈಗ ಎಸ್ ಐಟಿ ತಂಡದ ಸದಸ್ಯ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅವರ ನೇತೃತ್ವದಲ್ಲಿ ತಂಡವು ದಕ್ಷಿಣ ಕನ್ನಡದತ್ತ ಪ್ರಯಾಣ ಬೆಳೆಸಿದೆ. ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಭಾಗದ ಅಧಿಕಾರಿಗಳು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಳ್ತಂಗಡಿಯಲ್ಲಿ ಎಸ್ ಐ ಟಿ ಕಚೇರಿ ತೆರೆಯಲಾಗಿದೆ. ಅಲ್ಲಿ ಕಂಪ್ಯೂಟರ್, ಇಂಟರ್ ನೆಟ್ ಸೇರಿದಂತೆ ತನಿಖೆಗೆ ಅಔಶ್ಯಕತೆ ಇರುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.