ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶವಗಳನ್ನು ಹೂತುಹಾಕಿದ್ದೇನೆ ಎಂದು ಆರೋಪ ಮಾಡಿರುವ ಸಾಕ್ಷಿ ದೂರುದಾರ ಸಿಎನ್ ಚಿನ್ನಯ್ಯ ಅವರಿಗೆ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಲಯದ ಅದೇಶದಂತೆ ಚಿನ್ನಯ್ಯರನ್ನು ಭದ್ರತೆಯ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ.
ಎಸ್ ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಆಗಸ್ಟ್ 23ರಂದು ಬಂಧಿಸಿ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಆಗ ನ್ಯಾಯಾಲಯ ಆತನನ್ನು ಸೆ.3ರವರೆಗೆ ಎಸ್‌ಐಟಿ ವಶಕ್ಕೆ ಒಪ್ಪಿಸಿತ್ತು. ತದನಂತರ ಆತನ ಕಸ್ಟಡಿ ಅವಧಿಯನ್ನು ಸೆ. 6ರವರೆಗೆ ವಿಸ್ತರಿಸಿತ್ತು. ಇಂದು ಮತ್ತೆ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಂದು ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ.