ಮಂಗಳೂರು: ಸೌಜನ್ಯ ಪರ ಹೋರಾಟಗಾರ ,ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ತಿಮರೋಡಿ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಧರ್ಮಸ್ಥಳ ಪ್ರಕರಣ ಕುರಿತು ಸರ್ಕಾರ ಎಸ್ ಐಟಿ ರಚಿಸಿದ ನಂತರ ಇವರೂ ಕಾಣಿಸಿಕೊಳ್ಳುತ್ತಿದ್ದರು. ಪೊಲೀಸರು ಇವರನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇತ್ತೀಚೆಗೆ ಇವರ ತಿಮರೋಡಿ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಆಗ ಇವರ ನಿವಾಸದಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಇವರ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದು ವಿಚಾರಣೆ ಹಂತದಲ್ಲಿವೆ.