ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾಧ್ಯಮ ನಿರ್ಬಂಧ ತೆರವು ಕೋರಿ ಹೈಕೋರ್ಟ್‌ ಗೆ ಅರ್ಜಿ

Most read

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯ ಮೇಲಿನ ಅತ್ಯಾಚಾರ ಆರೋಪ, ಕೊಲೆ ಹಾಗೂ ಧರ್ಮಸ್ಥಳದಲ್ಲಿ ಕಾನೂನು ಬಾಹಿರವಾಗಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಪ್ರತಿಬಂಧಕ ಆದೇಶ ರದ್ದುಗೊಳಿಸಬೇಕು ಎಂದು ಕೋರಿ ‘ನ್ಯೂಸ್‌ ಮಿನಿಟ್‌ ವೆಬ್‌ ಪೋರ್ಟ್‌ಲ್‌’ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ.

ಮಾಧ್ಯಮ ವರದಿ ನಿರ್ಬಂಧಿಸಿ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ನ 10ನೇ ಹೆಚ್ಚುವರಿ ನ್ಯಾಯಾಲಯ ಈ ಕುರಿತಾದ ಅಸಲು ದಾವೆಯಲ್ಲಿ 2025ರ ಜುಲೈ 18ರಂದು ನೀಡಿರುವ ಪ್ರತಿಬಂಧಕ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿಯಲ್ಲಿ ಡಿ.ಹರ್ಷೇಂದ್ರಕುಮಾರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಈ ಸಂಬಂಧ ‘ಸ್ಪಂಕ್‌ ಲೇನ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕ ವಿಘ್ನೇಶ್‌ ವೆಲ್ಲೂರು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಇದೇ 11ರಂದು ನಡೆಯಲಿದೆ.

More articles

Latest article