ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಹೋರಾಟಕ್ಕೆ ದಿಗ್ವಿಜಯ

ನವದೆಹಲಿ : ದೇಶಾದ್ಯಂತ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಮತ್ತು NEET ಪರೀಕ್ಷಾ ಅಕ್ರಮಗಳ ವಿವಾದದ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ಸಾಮಾಜಿಕ ಜಾಲತಾಣ X ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ.

ಕಳೆದ ಹಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ಮತ್ತು ಹಲವು ಸಂಘಟನೆಗಳು ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. NEET ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದಿರುವುದು ಈ ಪ್ರತಿಭಟನೆಗಳ ಪ್ರಮುಖ ಕಾರಣವಾಗಿತ್ತು.

ರಾಜೀನಾಮೆ ಪತ್ರದಲ್ಲಿ ಏನಿದೆ?

ತಮ್ಮ ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್, ಈ ವಿವಾದದ ಮೊದಲ ದಿನದಿಂದಲೇ ತಾವು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾಗಿ ತಿಳಿಸಿದ್ದಾರೆ. ಯಾವುದೇ ಪ್ರತಿಭಾವಂತ ವಿದ್ಯಾರ್ಥಿಯ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ, ಜಂತರ್ ಮಂತರ್ ಮತ್ತು ದೇಶದ ವಿವಿಧ ಭಾಗಗಳಲ್ಲಿನ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ, ವಿದ್ಯಾರ್ಥಿಗಳ ಭವಿಷ್ಯ ಕಾನೂನು ಮತ್ತು ರಾಜಕೀಯ ಗೊಂದಲಗಳಲ್ಲಿ ಸಿಲುಕದಂತೆ ಮಾಡಲು ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.

ರಾಜಕೀಯ ಮಹತ್ವ

ಈ ರಾಜೀನಾಮೆ ಮೋದಿ ಸರ್ಕಾರಕ್ಕೆ ಮಹತ್ವದ ರಾಜಕೀಯ ಬೆಳವಣಿಗೆಯಾಗಿದೆ. ಹಲವು ದಿನಗಳಿಂದ ಪ್ರತಿಭಟನೆಗಳ ನಡುವೆಯೂ ಸರ್ಕಾರ ಸಚಿವರ ಪರ ನಿಂತಿತ್ತು. ಆದರೆ ವಿದ್ಯಾರ್ಥಿಗಳ ಒತ್ತಡ, ದೇಶವ್ಯಾಪಿ ಪ್ರತಿಭಟನೆಗಳು ಮತ್ತು ವಿರೋಧ ಪಕ್ಷಗಳ ನಿರಂತರ ಟೀಕೆಯ ನಡುವೆ ಕೊನೆಗೆ ಶಿಕ್ಷಣ ಸಚಿವರು ಸ್ಥಾನ ತ್ಯಜಿಸಿದ್ದಾರೆ. ಹಲವು ಮಾಧ್ಯಮಗಳು ಇದನ್ನು ವಿದ್ಯಾರ್ಥಿ ಚಳವಳಿಯ ಪ್ರಮುಖ ಗೆಲುವು ಎಂದು ವಿಶ್ಲೇಷಿಸಿವೆ.

ಮುಂದೇನು?

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪ್ರಧಾನಿ ಸ್ವೀಕರಿಸಿದ ನಂತರ ಕೇಂದ್ರ ಸರ್ಕಾರ ಹೊಸ ಶಿಕ್ಷಣ ಸಚಿವರನ್ನು ನೇಮಿಸುವ ಸಾಧ್ಯತೆಯಿದೆ. ಈ ನಡುವೆ ವಿದ್ಯಾರ್ಥಿ ಸಂಘಟನೆಗಳು ಮತ್ತು ಪ್ರತಿಭಟನಾಕಾರರು ತಮ್ಮ ಉಳಿದ ಬೇಡಿಕೆಗಳ ಕುರಿತು ಸರ್ಕಾರದ ಕ್ರಮವನ್ನು ಗಮನಿಸುತ್ತಿದ್ದಾರೆ.

ಜಂತರ್‌ಮಂತರ್‌ನಲ್ಲಿ ಮುಗಿಲುಮುಟ್ಟಿದ ಸಂಭ್ರಮ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ದೆಹಲಿಯ ಜಂತರ್‌ಮಂತರ್‌ನಲ್ಲಿ ಸಂಭ್ರಮ ಮುಗಿಲುಮುಟ್ಟಿತ್ತು.

ರಾಜೀನಾಮೆಯ ಸುದ್ದಿ ಹೊರಬೀಳುತ್ತಿದ್ದಂತೆ ಕಾಕ್ರೋಚ್ ಜನತಾಪಕ್ಷದ ಮುಖಂಡ ಅಭಿಜೀತ್ ದೀಪ್ಕೆ, ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ ಎಂದು ಸಂಭ್ರಮಿಸಿದರು. ಕೇಕೆ ಹಾಕಿ, ಚಪ್ಪಾಳೆ ತಟ್ಟುತ್ತಾ ಪರಸ್ಪರ ಅಭಿನಂದಿಸಿದರು. 35 ದಿನಗಳ ಸುದೀರ್ಘ ಹೋರಾಟಕ್ಕೆ ಸಂದ ಜಯ ಎಂದು ಹರ್ಷ ವ್ಯಕ್ತಪಡಿಸಿದರು.

‘ಸಿಜೆಪಿ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿದ್ದು, ಸಿಜೆಪಿ ಬೇಡಿಕೆಗಳನ್ನ ಪೂರೈಸಲು ಒಪ್ಪಿಗೆ ಸೂಚಿಸಿದೆ. ವಿದ್ಯಾರ್ಥಿಗಳ ಮೇಲೆ ಹಾಕಿರುವ ಕೇಸ್‌ ರದ್ದಿಗೆ ಒಪ್ಪಿಗೆ ಸೂಚಿಸಿರುವ ಕೇಂದ್ರ ಸರ್ಕಾರ ಎಫ್‌ಐಆರ್ ದಾಖಲಿಸಲ್ಲ ಅಂತ ಸ್ಪಷ್ಟಪಡಿಸಿದೆ. ಜೊತೆಗೆ ನಿಯಮಗಳನ್ನ ಪರಿಶೀಲಿಸಿ ಪರಿಹಾರ ಮೊತ್ತ ನಿಗದಿ ಮಾಡುವುದಾಗಿ ಹೇಳಿದೆ. ಹೀಗಾಗಿ ಇಲ್ಲಿಗೇ ಪ್ರತಿಭಟನೆ ಅಂತ್ಯಗೊಳಿಸಬೇಕು. ಇಷ್ಟು ದಿನ ಸಹಕಾರ ನೀಡಿದ ಎಲ್ಲಾ ವಿದ್ಯಾರ್ಥಿ ಸ್ನೇಹಿತರಿಗೆ ಧನ್ಯವಾದಗಳು,’ ಎಂದು ದೀಪ್ಕೆ ಹೇಳಿದರು.

More articles

Latest article

Most read