Friday, December 12, 2025

ಧರ್ಮಸ್ಥಳ ಹತ್ಯೆಗಳು; ಉಜಿರೆಯ ಖಾಸಗಿ ಕ್ಲಿನಿಕ್ ನಲ್ಲಿ ಮಾಹಿತಿ ಸಂಗ್ರಹಿಸಿದ ಎಸ್ ಐಟಿ, ಎಫ್ಎಸ್ಎಲ್  ತಂಡ

Most read

ಉಜಿರೆ: ಧರ್ಮಸ್ಥಳದಲ್ಲಿ ನಡೆದ ಅಪರಾಧ ಕೃತ್ಯಗಳ ತನಿಖೆ ನಡೆಸುತ್ತಿರುವ  ವಿಶೇಷ ತನಿಖಾ ತಂಡ (ಎಸ್ಐಟಿ) ತಂಡ, ಉಜಿರೆಯ ಖಾಸಗಿ ಕ್ಲಿನಿಕ್ ಗೆ  ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ ಪಕ್ಕದ ಎಸ್.ಕೆ.ಮೆಮೋರಿಯಲ್ ಹಾಲ್ ನಲ್ಲಿರುವ ಖಾಸಗಿ ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದ ಎಸ್.ಐ.ಟಿ  ಮತ್ತು ಎಫ್ಎಸ್ಎಲ್ ಸೋಕೋ ತಂಡದ ಅಧಿಕಾರಿಗಳು ಇಂದು ಮಧ್ಯಾಹ್ನ ಭೇಟಿ ನೀಡಿದ್ದರು. ಕ್ಲಿನಿಕ್ ನಲ್ಲಿ ಪರಿಶೀಲನೆ ನಡೆಸಿ ಅಲ್ಲಿನ ವೈದ್ಯ  ಡಾ.ದಯಾಕರ್ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಧರ್ಮಸ್ಥಳ ನೇತ್ರಾವತಿ ನದಿ ಸಮೀಪದ ಬಂಗ್ಲೆ ಗುಡ್ಡದಲ್ಲಿ ಪತ್ತೆಯಾಗಿರುವ ಮಾನವ ಅವಶೇಷಗಳ ಮೂಲವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ಕ್ಲಿನಿಕ್‌ ನಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.

More articles

Latest article