ಇನ್ನು ಮುಂದೆ ವೆಬ್‌ಸೈಟ್, ಯೂಟ್ಯೂಬ್‌ಗಳಿಗೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Most read

ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟ ಮಾಡುವುದರಿಂದ ಹೆಚ್ಚು ಯುವ ಸಮೂಹವನ್ನು ತಲುಪಲು ಸಹಾಯವಾಗುತ್ತದೆ. ಹೀಗಾಗಿ ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತದೆ. ಈ ಹಿನ್ನಲೆ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024ನ್ನು ಜಾರಿಗೊಳಿಸಿ, ಡಿಜಿಟಲ್ ಜಾಹೀರಾತಿಗೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ತಲುಪಿಸುವ ಡಿಜಿಟಲ್ ಜಾಹೀರಾತು ವ್ಯವಸ್ಥೆ ಬಳಸಿಕೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತೀರ್ಮಾನಿಸಿದ್ದು, ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅರ್ಹತೆ ಪಡೆಯಲು ಡಿಜಿಟಲ್ ಘಟಕಗಳು ಕಡ್ಡಾಯವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿರಬೇಕು ಎಂದು ತಿಳಿಸಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೀಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಡಿಜಿಟಲ್‌ Influencers ಆಯ್ಕೆಗೆ ಮಾನದಂಡ ನಿಗದಿ ಮಾಡಿದ್ದು, ಡಿಜಿಟಲ್ ಜಾಹೀರಾತು ಏಜೆನ್ಸಿಗಳಿಗೂ ಮಾನದಂಡ ಹೇರಲಾಗಿದೆ.

ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಂಪನೀಸ್ ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು, ಎಂಪ್ಯಾನೆಲಿಂಗ್ ಸಮಯದಲ್ಲಿ ಕನಿಷ್ಠ ಎರಡು ವರ್ಷವಾಗಿರಬೇಕು, ಮಾನ್ಯವಾದ ಜಿಎಸ್ ಟಿ ನೋಂದಣಿ ಇರಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಕಚೇರಿ ಇರಬೇಕು. ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಪ್ರಾವೀಣ್ಯತೆ ಇರಬೇಕು. ಡಿಜಿಟಲ್ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣದ ಕುರಿತು ಆಳವಾದ ಜ್ಞಾನವಿರಬೇಕು.

ವಿಡಿಯೋ ಸ್ಕ್ರೀಮಿಂಗ್​ ಪ್ಲಾಟ್​ಫಾರ್ಮ್​ಗಳು: ಗೂಗಲ್​ (ಯೂಟ್ಯೂಬ್​), ಮೆಟಾ (ಫೇಸ್​​ಬುಕ್​), ಇನ್​ಸ್ಟಾಗ್ರಾಂ, ವಾಟ್ಸಾಪ್​ ಬಿಸಿನೆಸ್​, ಇತರೆ.

ಸರ್ಚ್​ ಇಂಜಿನ್​ಗಳು: ಗೂಗಲ್​, ಬಿಂಗ್​ ಮತ್ತು ಇತರೆ.

ಸಾಮಾಜಿಕ ಜಾಲತಾಣಗಳು: ಎಕ್ಸ್​(ಟ್ವೀಟರ್​) ಫೇಸ್​ಬುಕ್​, ಇನ್​ಸ್ಟಾಗ್ರಾಂ, ವಾಟ್ಸಾಪ್​, ಟೆಲಿಗ್ರಾಂ, ಲಿಂಕ್​ಡ್​ಇನ್​, ಇತ್ಯಾದಿ.

ಒಟಿಟಿ ಪ್ಲಾಟ್​ಫಾರ್ಮ್​: ನೆಟ್​ಫ್ಲಿಕ್ಸ್​, ಅಮೇಜಾನ್​ ಫ್ರೈಮ್​, ಸನ್​ನೆಕ್ಸ್ಟ್​, ಇತರೆ.

ಫಿನ್​ಟೆಕ್ ಪ್ಲಾಟ್​ಫಾರ್ಮ್​: ಪೇಟಿಎಂ, ಫೋನ್​ಪೇ ಮತ್ತು ಗೂಗಲ್​ಪೇ ಇತರೆ.​

More articles

Latest article