ಸಚಿವ ಸತಿಶ್‌ ಜಾರಕಿಹೊಳಿ ಏರ್ಪಡಿಸಿದ್ದ ಔತಣಕೂಟದಲ್ಲಿ ನಡೆದ ಚರ್ಚೆ ಏನು?

Most read

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟ ತೀವ್ರ ಕುತೂಹಲ ಕೆರಳಿಸಿದೆ. ಈ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಸೇರಿದಂತೆ ಏಳು ಸಚಿವರು ಹಾಗೂ 35ಕ್ಕೂ ಹೆಚ್ಚು ಶಾಸಕರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.ನಿನ್ನೆಯ ಸಂಪುಟ ಸಭೆಯ ಬಳಿಕ ಸಚಿವ ಜಾರಕಿಹೊಳಿ ಅವರ ಅಧಿಕೃತ ನಿವಾಸದಲ್ಲಿ ಔತಣಕೂಟ ಹಮ್ಮಿಕೊಳ್ಳಲಾಗಿತ್ತು.  ಸಚಿವ ಸಂಪುಟ ಪುನಾರಚನೆ ಮತ್ತು ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಕುರಿತು ಗುಸುಗುಸು ಚರ್ಚೆ ನಡೆಯುತ್ತಿರುವಾಗಲೇ ಈ ಔತಣ ಕೂಟ ನಡೆದಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಂಪುಟ ಪನಾರಚನೆ ಮತ್ತು ಅದರ ಸಾಧಕ ಭಾದಕಗಳನ್ನು ಕುರಿತು ಮುಖ್ಯಮಂತ್ರಿಗಳು ತಮ್ಮ ಆಪ್ತ ಸಚಿವರು ಮತ್ತು ಶಾಸಕರೊಂದಿಗೆ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

More articles

Latest article