ವಿಕಲ ಚೇತನರು ದೇವರ ಮಕ್ಕಳು :ಡಿಸಿಎಂ ಡಿ.ಕೆ.ಶಿವಕುಮಾರ್

Most read

 ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿಶೇಷ ಚೇತನರಿಗೆ ಮನೋಬಲವೇ ಶಕ್ತಿ ಎಂದರು.

ಕಳೆದ ಬಾರಿ ಸಾಮಾನ್ಯ ಒಲಿಂಪಿಕ್ಸ್‌ಗಿಂತಲೂ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ವಿಶೇಷ ಚೇತನರು ೨೧ ಪದಕಗಳನ್ನು ಭಾರತಕ್ಕೆ ಗೆದ್ದುಕೊಟ್ಟರು. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ವಿಕಲ ಚೇತನರು ಉತ್ತಮ ಸಾಧನೆ ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಥ್ಯದ ನಮ್ಮ ಸರ್ಕಾರ ವಿಶೇಷ ಚೇತನರ ಕಾರ್ಯಕ್ರಮಗಳನ್ನು ಮುಟ್ಟಿಸುತ್ತೇವೆ. ಭಗವಂತನ ಸೃಷ್ಟಿ ನಿಮಗೆ ಸಾಧನೆ ಮಾಡಲು ಪ್ರೇರಣೆಯಾಗಿದೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ. ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

 ಲಕ್ಷ್ಮೀ ಹೆಬ್ಬಾಳಕರ್‌ ಕ್ರಿಯಾಶೀಲ ಸಚಿವೆ:

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತುಂಬಾ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿಶೇಷ ಚೇತನರಿಗೆ ಇಲಾಖೆಯಲ್ಲಿರುವ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ, ಸುಧಾರಣೆ ತರಲು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರ ಕಾರ್ಯವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶ್ಲಾಘಿಸಿದರು.

More articles

Latest article