ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಮಾತ್ರ ತಕರಾರು  : ಸಿಎಂ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರುದ್ಧ ಇಲ್ಲ. ಕ್ಷೇತ್ರ ಪುನರ್ ವಿಂಗಡಣೆ ವಿಚಾರವಾಗಿ ಮಾತ್ರ ನಮ್ಮ ತಕರಾರಿದ್ದು,  ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ.  ತಿರುಗೇಟು ನೀಡಿದರು. 

ಸೋಮವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,  ಹೊಸ ಜನಗಣತಿ ಪ್ರಕಾರ ಕ್ಷೇತ್ರ ಪುನರ್ ವಿಂಗಡಣೆಯಾಗಬೇಕು. ಭೌಗೋಳಿಕ ವ್ಯಾಪ್ತಿ ಮತ್ತು ಜನಸಂಖ್ಯೆ ಕ್ಷೇತ್ರ ಪುನರ್ ವಿಂಗಡಣೆಗೆ ಮುಖ್ಯ ಎಂದು ವಾದಿಸಿದರು.

ಜನಗಣತಿ ಪೂರ್ಣವಾದ ನಂತರದಲ್ಲಿ ಕ್ಷೇತ್ರ ವಿಂಗಡಣೆ ಆಗುವುದು ಸೂಕ್ತ. ಹಳೆಯ ಜನಗಣತಿ ಪ್ರಕಾರ ಆದರೆ ಕರ್ನಾಟಕಕ್ಕೆ ಅನ್ಯಾಯ ಆಗುತ್ತದೆ.ಉತ್ತರ ಭಾರತದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡಿಯೇ ಇಲ್ಲ.ನಾವು ಇಲ್ಲಿ ಜನಸಂಖ್ಯೆ ನಿಯಂತ್ರಣ ಮಾಡಿದ್ದೇವೆ. ನಮಗೆ ಇಲ್ಲಿ ಅನ್ಯಾಯ ಆಗಬಾರದು ಎಂದು ಹೇಳಿದರು.

ಮಹಿಳಾ  ಮೀಸಲಾತಿ ಜಾರಿಯ ಬದ್ಧತೆ ಬಿಜೆಪಿಗೆ ಇಲ್ಲ.ವಿಧೇಯಕದ ವಿಚಾರದಲ್ಲಿ ಸುಳ್ಳು ಹೇಳುತ್ತಾ ರಾಜಕಾರಣ ಮಾಡುತ್ತಿದೆ. 2023 ರಲ್ಲೇ ಮೀಸಲಾತಿ ವಿಧೇಯಕ ಇತ್ತು.ಅದನ್ನು ಅವತ್ತೇ ಯಾಕೆ ಜಾರಿ ಮಾಡಬಾರದಿತ್ತು ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಶಾಸಕರಾದ ಹ್ಯಾರಿಸ್‌ ಮತ್ತಿತರ ಮನೆ ಮೇಲೆ: ಇಡಿ ದಾಳಿ ವಿಚಾರ. ನನಗೆ ಗೊತ್ತಿಲ್ಲ. ನಾನು ತಮಿಳುನಾಡಿಗೆ ಪ್ರಚಾರಕ್ಕೆ ಹೋಗುವುದಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಗೆಲ್ಲಬಹುದು. ಬಿಜೆಪಿಯವರು ಪಂಚರಾಜ್ಯ ಚುನಾವಣೆಯಲ್ಲಿ ನಮ್ಮ ಗ್ಯಾರೆಂಟಿಗಳನ್ನು ನಕಲು ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ನಮ್ಮ ಗ್ಯಾರಂಟಿಗಳನ್ನು ಮೊದಲು ಬಿಜೆಪಿ ವಿರೋಧ ಮಾಡುತ್ತಿತ್ತು, ಈಗ ಇದನ್ನು ಅವರೇ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. 

ನರೇಂದ್ರ ಮೋದಿ ಕೇಳಿದ್ದೇನು?
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ  ಪ್ರಧಾನಿ ಮೋದಿ ಅವರು, ತಮ್ಮ ಕಿವಿಯಲ್ಲಿ ಗುಟ್ಟಾಗಿ ಮಾತನಾಡಿದ ರಹಸ್ಯವನ್ನು ಬಿಚ್ಚಿಟ್ಟರು. ಮೋದಿ ಅವರು ಮಹಿಳಾ ಮೀಸಲಾತಿ ವಿಚಾರದಲ್ಲಿ ನಿಮ್ಮ ನಿಲುವು ಏನು ಎಂದು ನನ್ನ ಕಿವಿ ಬಳಿ ಬಂದು ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಹೇಳಿದೆ ಎಂದು ತಿಳಿಸಿದರು.

More articles

Latest article

Most read