ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿಯ ದಿವಾಕರ್ ಶೆಟ್ಟಿ ನಿಧನ

ಸಕಲೇಶಪುರ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿ ಗ್ರಾಮದ ದಿವಾಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತ ಪಟ್ಟಿದ್ದಾರೆ.

ತಾಲೂಕಿನ ವಾಟೆಹಳ್ಳಿ ಗ್ರಾಮದ ದಿವಾಕರ ಶೆಟ್ಟಿ (62 ) ಜೂನ್ 13ರಂದು ಕಾಡಾನೆ ತುಳಿತಕ್ಕೆ ಒಳಗಾಗಿದ್ದರು.

ತೀವ್ರ ಸ್ವರೂಪದ ಗಾಯಗಳಾಗಿದ್ದ ದಿವಾಕರ್ ಶೆಟ್ಡಿಯವರಿಗೆ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಅವರು ಚೇತರಿಸಿಕೊಳ್ಳಲಿಲ್ಲ.

ಮೃತರ ಅಂತ್ಯಕ್ರಿಯೆ ಇಂದು ಸಂಜೆ ವಾಟೇಹಳ್ಳಿಯಲ್ಲಿ ನಡೆಯಲಿದೆ. ಶಾಸಕ ಸಿಮೆಂಟ್ ಮಂಜು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

More articles

Latest article

Most read