ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕರ್ನಾಟಕ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿರುವ ನಳೀನ್ ಕುಮಾರ್ ಕಟೀಲ್ ಅವರನ್ನು ಬಿಟ್ಟು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ಲೋಕಸಭೆ ಚುನಾವಣೆಯ ಬಿಜೆಪಿ ಅರ್ಭರ್ಥಿಗಳ ೨ನೇ ಪಟ್ಟಿನ್ನು ಇಂದು (ಮಾರ್ಚ್ 13) ಪ್ರಕಟ ಮಾಡಲಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಇದರಲ್ಲಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಈ ಪೈಕಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್ ಘೋಷಣೆ ಮಾಡಿದ್ದು, ಇವರು ಕೂಡ ಹೊಸಬರಾಗಿದ್ದಾರೆ.
ಸದಾ ಹಾಸ್ಯಬರತಿ, ಕೋಮುದ್ವೇಷದ ಭಾಷಣಗಳನ್ನು ಮಾಡಿಕೊಂಡು ಪ್ರಚಾರದಲ್ಲಿದ್ದ ನಳೀನ್ ಕುಮಾರ್ ಕಟೀಲ್ಗೆ ಈಗ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೆ ಶಾಕ್ ನೀಡಿದೆ. ಮೋದಿ ಹೆಸರೇಳಿಕೊಂಡೆ ಗೆಲ್ಲುತ್ತಾ ಬಂದಿರುವ ನಳೀನ್ ಹ್ಯಾಟ್ರಿಕ್ ಗೆಲುವು ನಿರೀಕ್ಷೆಯಲ್ಲಿ ಇದ್ದರು. ಆದರೆ ಇದಕ್ಕೆ ಬಿಜೆಪಿ ಪುಲ್ ಸ್ಟಾಪ್ ಹಾಕಿದೆ.
ಬಿಜೆಪಿ ಭದ್ರಕೋಟೆಯಲ್ಲಿ ವ್ಯಕ್ತಿಗಿಂತ ಪಕ್ಷದ ಶಕ್ತಿಯೇ ದೊಡ್ಡದು. ಯಾರನ್ನೇ ನಿಲ್ಲಿಸಿದರೂ ಗೆಲುವು ನಿಶ್ಚಿತ ಅನ್ನೋ ವಿಶ್ವಾಸ ಬಿಜೆಪಿ ನಾಯಕರಲ್ಲಿದೆ. ಆದರೆ ಈ ಭಾರಿ ಗೆಲುವು ಅಷ್ಟು ಸುಲಭವಿಲ್ಲ ಎನ್ನುವುದು ರಾಜಕೀಯ ವಿಶ್ಲೇಷಕರ ಅಂದಾಜು.
42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದಿದ್ದಾರೆ. 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು. 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು.
2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟಗೆ ಈಗ ಬಿಜೆಪಿ ಲೋಕಸಭಾ ಟಿಕೆಟ್ ನೀಡಿದ್ದಾರೆ.