ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ: ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡುವವರಿಗೆ ಡಿಕೆಶಿ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗದ್ದಲ ಮುಂದುವರೆದಿದೆ. ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಲೇ ಇದ್ದಾರೆ. ಇದರ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಅವರು ಖಡಕ್ ಎಚ್ಚಸಿಕೆ ನೀಡಿದ್ದಾರೆ.

ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

More articles

Latest article

Most read