ಇಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಮುಖ್ಯಮಂತ್ರಿಯನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳ ಹೆಸರನ್ನು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ಬಳಿಕ ಮಾತನಾಡಿದ ಅವರು, ಕೇಂದ್ರ ಹಾಗೂ ಇಡಿ ಅಧಿಕಾರಿಗಳ ನಡೆಯನ್ನು ಖಂಡಿಸಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ, ಇಡಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ ಎಂದು ಹೇಳಿದರು.
ಎಫ್‌ಐಆರ್ ಆಗಿದೆ, ಕಾನೂನು ಪ್ರಕಾರ ಏನು ಆಗಬೇಕು ಅದು ಆಗುತ್ತೆ, ನಾವು ಅದಿಕ್ಕೆ ಎಂಟ್ರಿ ಕೊಡಲ್ಲ, ನಾವು ಪೊಲೀಸ್ ಸ್ಟೇಷನ್ ಅಲ್ಲ, ನಾವು ಸರ್ಕಾರ ಅಷ್ಟೆ. ದೂರು ದಾಖಲಾಗಿದೆ ತನಿಖೆ ಮಾಡ್ತಾರೆ ಅಷ್ಟೇ. ಕೇಂದ್ರ ದುರುಪಯೋಗ ಮಾಡ್ತಾರೆ ಅಂತ ನಾವು ಮಾಡಲ್ಲ ಎಂದು ಹೇಳಿದರು.
ದೇಶದ ಇತಿಹಾಸದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯನ್ನೇ ಟಾರ್ಗೆಟ್ ಮಾಡ್ತಿರೋದನ್ನು ವಿರೋದಿಸಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.