ಬಿಜೆಪಿ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ; ಡಿಕೆ ಶಿವಕುಮಾರ್ ವ್ಯಂಗ್ಯ

Most read

ಬೆಂಗಳೂರು: ಅಡುಗೆ ಅನಿಲ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ಎಲ್ಲಾ ಬಿಜೆಪಿ ಸ್ನೇಹಿತರಿಗೆ ನಮಸ್ಕಾರ, ತಾವೆಲ್ಲರೂ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ. ನಾನು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇನೆ. ಕೇಂದ್ರ ಸರ್ಕಾರ ನಿಮಗೆ ಕಪಾಳಮೋಕ್ಷ ಮಾಡಿದೆ. ಈ ಜನಾಕ್ರೋಶ ಯಾತ್ರೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ಪ್ರೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದು ನಿಮಗೆಲ್ಲ ತಿಳಿದಿದೆ. ತಮ್ಮ ಆಕ್ರೋಶವನ್ನು ನಿಮ್ಮ ಕೇಂದ್ರ ಸರ್ಕಾರ ವಿರುದ್ಧ ಮುಂದುವರಿಸಬೇಕು ಎಂದು ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ, 16 ದಿನಗಳ ಜನಾಕ್ರೋಶ ಯಾತ್ರೆಯನ್ನು ಬಿಜೆಪಿ ಪ್ರಾರಂಭಿಸಿದೆ.

More articles

Latest article