ಚನ್ನಪಟ್ಟಣಕ್ಕೆ ಡಿ.ಕೆ.ಸುರೇಶ್ ಕಾಂಗ್ರೆಸ್ ಅಭ್ಯರ್ಥಿ???

ಉಪ ಚುನಾವಣೆ ನಡೆಲಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಯೊಂದು ಇಡೀ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ. ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಎಂ.ಸಿ. ಅಶ್ವಥ್ ಅವರು ಇಂದು ಮಾತನಾಡಿ ಸುರೇಶ್ ಅವರೇ ಅಭ್ಯರ್ಥಿಯಾಗಲಿದ್ದು, ಅವರು ಗೆಲ್ಲಲಿದ್ದಾರೆ. ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರೂ ಆಗಲಿದ್ದಾರೆ ಎಂದು ಹೇಳಿದ್ದಾರೆ.

ಅವರು ಗೆಲುವು ಸಾಧಿಸಲಿ ಎಂಬ ಉದ್ಧೇಶದಿಂದ ನಮ್ಮ ಕುಟುಂಬದ ವತಿಯಿಂದ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ ಚಂಡಿಕಾಯಾಗ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ನಾಯಕರು ಮತ್ತು ಮುಖಂಡರಿಗೆ ಒಳ್ಳೆಯದಾಗಬೇಕು. ಪಕ್ಷದ ಚಿನ್ಹೆಗೆ ಗೆಲುವು ತಂದು ಕೊಡಬೇಕು ಎಂಬ ಉದ್ಧೇಶದಿಂದ ಯಾಗ ಮಾಡಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

More articles

Latest article

Most read