ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿಕೊಂಡರ ಡಿ ಕೆ ಸುರೇಶ್

Most read

ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್ ಅವರು ದೇಶ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ 2ನೇ JMFC ನ್ಯಾಯಾಲಯಕ್ಕೆ ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರಿನ ಅರ್ಜಿ ಸಲ್ಲಿಸಿದ್ದಾರೆ.

ಈ ಹೇಳಿಕೆಯೂ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆ ಉಂಟುಮಾಡಿದೆ. ಆದ್ದರಿಂದ ಸಂಸದರಿಗೆ ತಕ್ಷಣವೇ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿ ಮುಖಂಡ ವಿಕಾಸ್.ಪಿ ‘ಡಿ.ಕೆ ಸುರೇಶ್ ದೇಶ ವಿರೋಧಿ, ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲು ಮಂಗಳೂರು ಆಯುಕ್ತರಿಗೆ ಹಾಗೂ ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದೆವುʼ ಎಂದರು.

ಮುಂದುವರೆದು, ಕಾಂಗ್ರೆಸ್ ಈ ಹಿಂದೆ ಭಾರತವನ್ನು ತುಂಡು ಮಾಡಿದ್ದನ್ನು ಮುಂದುವರಿಸುವ ಗುತ್ತಿಗೆಯನ್ನು ಸುರೇಶ್ ತೆಗೆದುಕೊಂಡಿದ್ದಾರೆ. ಭಾರತದ ಕಾನೂನು ವ್ಯವಸ್ಥೆ, ನ್ಯಾಯಾಧೀಶರ ಮೇಲೆ ಸಂಪೂರ್ಣ ನಂಬಿಕೆಯಿದೆ. ಹೀಗಾಗಿಯೇ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ಡಿ.ಕೆ ಸುರೇಶ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂಬ ಭರವಸೆ ಇದೆ ಎಂದರು.

ಕೂಡಲೇ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಲೋಕಸಭೆ ಸ್ಪೀಕರ್‌‌ ಓಂ ಬಿರ್ಲಾ ಅವರಿಗೆ ವಿಧಾನಪರಿಷತ್ ನ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಅವರು ಪತ್ರ ಬರೆದಿದ್ದಾರೆ.

 

More articles

Latest article