ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಅಭಿವೃದ್ಧಿ ಮಾಡುವುದರ ಬದಲಾಗಿ
ಆರೋಪ ಪ್ರತ್ಯಾರೋಪ, ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಇನ್ನೂ 4 ವರ್ಷ ಇದೆ. ಈ ಬೆಳವಣಿಗೆ ರಾಜ್ಯದ ಜನರಿಗೆ ಎಳ್ಳಷ್ಟೂ ಇಷ್ಟವಿಲ್ಲ. ನಾನು ಮೂರು ಪಕ್ಷಗಳಿಗೆ ಎಚ್ಚರಿಕೆಯಾಗಿ ಹೇಳುತ್ತಿದ್ದೇನೆ. ದಿನೇ ದಿನೇ ಇದೇ ವಿಚಾರವನ್ನು ದೊಡ್ಡದು ಮಾಡಬಾರದು. ಈ ರೀತಿ ಬೀದಿಯಲ್ಲಿ ಕಿತ್ತಾಟ ಮಾಡೋದು ಸರಿಯೇ ಎಂದು ಆತ್ಮಾವಲೋಕನಾ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ದೇಶದಲ್ಲಿ ಎನ್‌ಡಿಎಗೆ ಸರ್ಕಾರ ನಡೆಸಲು ಜನರು ಅವಕಾಶ ಕೊಟ್ಟಿದ್ದಾರೆ. ಅಭಿವೃದ್ಧಿ ಮಾಡುವುದರ ಬದಲಾಗಿ
ಆರೋಪ ಪ್ರತ್ಯಾರೋಪ, ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ದಸರಾ ವೇಳೆ ಚಾಮುಂಡೇಶ್ವರಿ ಪೂಜಿಸುವ ಸಂದರ್ಭದಲ್ಲಿ ನೊಂದು ಹೇಳುತ್ತಿದ್ದೇನೆ ಎಂದಿದ್ದಾರೆ.
ಯಾವುದೇ ರಾಜಕೀಯ ಪಕ್ಚವಿರಲಿ ಇಂತಹ ಸ್ಥಿತಿಗೆ ಇಳಿಯಬಾರದು. ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಕೊಡಲಿದೆ. ಎಲ್ಲರ ಮೇಲೆ ತನಿಖೆಗಳು ನಡೆಯುತ್ತಿವೆ ಆದೇಶಗಳು ಬರುವವರೆಗೆ ಕಾಯಬೇಕು. ಬದಲಾಗಿ ಪ್ರತಿದಿನ ಇದನ್ನೇ ದೊಡ್ಡದು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನರು ನಮ್ಮ ನಾಯಕರು. ಐದು ವರ್ಷ ಅವರೇ ಮುಖ್ಯಮಂತ್ರಿಗಳಾಗಿರ್ತಾರೆ. ಯಾರು ಅವರನ್ನು ಅಲಾಡಿಸಲು ಆಗಲ್ಲ.ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿದೆ. ಅವರು ಎಲ್ಲಾ ಸಮಸ್ಯೆಗಳಿಂದ ಬೇಗ ಹೊರ ಬರ್ತಾರೆ ಎಂದು ಭವಿಷ್ಯ ನುಡಿದರು.